Judges 13:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮನುಷ್ಯನು ನಿಜವಾಗಿಯೂ ಯೆಹೋವನ ದೂತನೆಂದು ಕೊನೆಗೆ ಮಾನೋಹನು ಅರಿತುಕೊಂಡನು. ಯೆಹೋವನ ದೂತನು ಅವರಿಗೆ ಪುನಃ ಕಾಣಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಮತ್ತೆ ಕಾಣಿಸಲಿಲ್ಲ. ಆಗ ಮಾನೋಹನು ಆತನು ಯೆಹೋವನ ದೂತನೆಂದು ತಿಳಿದು
Kannada BSI Bible 2016
ಆದರೆ ಕರ್ತನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸ ಲಿಲ್ಲ. ಆಗ ಇವನು ಕರ್ತನ ದೂತನೆಂದು ಮಾನೋಹನು ತಿಳುಕೊಂಡನು. ಮಾನೋಹನು ತನ್ನ ಹೆಂಡತಿಗೆ--ನಾವು ದೇವರನ್ನು ಕಂಡದ್ದರಿಂದ ನಿಶ್ಚಯ ವಾಗಿ ಸಾಯುವೆವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸಲಿಲ್ಲ; ಆಗ ಮಾನೋಹನು ಆತನು ಯೆಹೋವನ ದೂತನೆಂದು ತಿಳಿದು ತನ್ನ ಹೆಂಡತಿಗೆ -
Kannada Bible (KNCL) BSI 2016
ಸರ್ವೇಶ್ವರನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಪುನಃ ಕಾಣಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ದೂತನು ಮಾನೋಹನಿಗೂ, ಅವನ ಹೆಂಡತಿಗೂ ತಿರುಗಿ ಕಾಣಿಸಲಿಲ್ಲ. ಆಗ ಮಾನೋಹನು, ಅವನು ದೇವರ ದೂತನು ಎಂದು ತಿಳಿದುಕೊಂಡನು.