Judges 13:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವನ ಹೆಂಡತಿಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬಯಸುವುದಿಲ್ಲ. ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಆತನು ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಇದನ್ನೆಲ್ಲ ನಮಗೆ ಹೇಳುತ್ತಿರಲಿಲ್ಲ” ಅಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆಕೆಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ” ಅಂದಳು.
Kannada BSI Bible 2016
ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನು ಎಂದು ಹೆಸರಿಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಅವನಿಗೆ - ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿದ್ದಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿದ್ದಿಲ್ಲ, ಹೇಳುತ್ತಿದ್ದಿಲ್ಲ ಅಂದಳು.
Kannada Bible (KNCL) BSI 2016
ದೇವರನ್ನು ಕಣ್ಣಾರೆ ಕಂಡೆವಲ್ಲಾ!” ಎಂದನು. ಆಕೆ ಅವನಿಗೆ, “ಸರ್ವೇಶ್ವರ ನಮ್ಮನ್ನು ಕೊಲ್ಲಬೇಕೆಂದಿದ್ದರೆ ಅವರು ನಮ್ಮ ಕೈಯಿಂದ ಬಲಿಯನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ. ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಹೇಳುತ್ತಿರಲಿಲ್ಲ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಹೆಂಡತಿ ಅವನಿಗೆ, “ಯೆಹೋವ ದೇವರು ನಮ್ಮನ್ನು ಕೊಲ್ಲಬೇಕೆಂದಿದ್ದರೆ, ಅವರು ನಮ್ಮ ಕೈಯಿಂದ ದಹನಬಲಿಯನ್ನೂ, ಅರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯಮಾಡುತ್ತಿರಲಿಲ್ಲ,” ಎಂದಳು.