Judges 13:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷನು ನನ್ನಲ್ಲಿಗೆ ಬಂದನು. ಅವನು ದೇವರಿಂದ ಬಂದ ದೇವದೂತನಂತೆ ಕಂಡನು. ನನಗೆ ಭಯವಾಯಿತು. ನಾನು ಅವನಿಗೆ, ‘ನೀನು ಎಲ್ಲಿಂದ ಬಂದೆ?’ ಎಂದು ಕೇಳಲಿಲ್ಲ; ಅವನೂ ನನಗೆ ತನ್ನ ಹೆಸರನ್ನು ಹೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವರಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.
Kannada BSI Bible 2016
ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ - ಒಬ್ಬ ದೇವಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.
Kannada Bible (KNCL) BSI 2016
ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. ‘ಎಲ್ಲಿಂದ ಬಂದಿರಿ?’ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆ, “ಒಬ್ಬ ದೇವರ ಮನುಷ್ಯ ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾ ಭಯಂಕರವಾಗಿತ್ತು. ನಾನು ಅವನನ್ನು ಎಲ್ಲಿಂದ ಬಂದೆ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.