Judges 13:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅವನು ನನಗೆ, ‘ನೀನು ಗರ್ಭವತಿಯಾಗಿರುವೆ; ನಿನಗೊಬ್ಬ ಮಗನು ಹುಟ್ಟುತ್ತಾನೆ. ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ. ಯಾವ ನಿಷಿದ್ಧ ಆಹಾರವನ್ನೂ ತಿನ್ನಬೇಡ. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೂ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು”‘ ಅಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು.
Kannada BSI Bible 2016
ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನನಗೆ - ನೀನು ಗರ್ಭವತಿಯಾಗಿ ಮಗನನ್ನು ಹೆರುವಿ; ಆದದರಿಂದ ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು ಅಂದಳು.
Kannada Bible (KNCL) BSI 2016
ಆದರೆ ಆತ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,’ ಎಂದು ಹೇಳಿದನು,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಈಗ ನೀನು ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುದ್ಧವಾದ ಒಂದನ್ನಾದರೂ ತಿನ್ನದೆ ಇರು. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಮರಣಹೊಂದುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು,’ ಎಂದಳು.”