Judges 13:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮಾನೋಹನು ಯೆಹೋವನಿಗೆ, “ಸ್ವಾಮೀ, ಆ ದೇವಪುರುಷನನ್ನು ನಮ್ಮಲ್ಲಿಗೆ ಇನ್ನೊಮ್ಮೆ ದಯವಿಟ್ಟು ಕಳುಹಿಸೆಂದು ಬೇಡಿಕೊಳ್ಳುತ್ತೇವೆ. ಹುಟ್ಟಿಲಿರುವ ಮಗನಿಗಾಗಿ ನಾವು ಮಾಡಬೇಕಾದದ್ದನ್ನು ಅವನು ನಮಗೆ ತಿಳಿಸಲಿ” ಎಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾನೋಹನು ಇದನ್ನು ಕೇಳಿ ಯೆಹೋವನಿಗೆ, “ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು.
Kannada BSI Bible 2016
ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾನೋಹನು ಇದನ್ನು ಕೇಳಿ ಯೆಹೋವನಿಗೆ - ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು;
Kannada Bible (KNCL) BSI 2016
ಮಾನೋಹನು ಇದನ್ನು ಕೇಳಿ ಸರ್ವೇಶ್ವರನಿಗೆ, “ಸ್ವಾಮೀ, ದಯವಿರಲಿ; ನೀವು ಕಳುಹಿಸಿದ ದೇವಪುರುಷ ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿರುವ ಮಗುವಿಗಾಗಿ ಮಾಡಬೇಕಾದುದ್ದನ್ನು ನಮಗೆ ಬೋಧಿಸಲಿ,” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮಾನೋಹನು ಯೆಹೋವ ದೇವರಿಗೆ ಬೇಡಿಕೊಂಡು, “ನನ್ನ ಕರ್ತದೇವರೇ, ನೀವು ಕಳುಹಿಸಿದ ದೇವರ ಮನುಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು, ಹುಟ್ಟುವ ಕೂಸಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ,” ಎಂದು ಪ್ರಾರ್ಥಿಸಿದನು.