Judges 14:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಸಂಸೋನನು ಆ ಮೂವತ್ತು ಜನರಿಗೆ, “ನಾನು ನಿಮಗೊಂದು ಒಗಟನ್ನು ಹೇಳಬಯಸುತ್ತೇನೆ. ಈ ಔತಣವು ಏಳು ದಿನ ಮುಂದುವರಿಯುತ್ತದೆ. ಈ ಅವಧಿಯಲ್ಲಿ ನೀವು ಉತ್ತರವನ್ನು ಹೇಳುವ ಪ್ರಯತ್ನ ಮಾಡಿರಿ. ನೀವು ಈ ಅವಧಿಯಲ್ಲಿ ಒಗಟುಗಳ ಅರ್ಥ ಹೇಳಿದರೆ ನಾನು ನಿಮಗೆ ಮೂವತ್ತು ನಾರುಬಟ್ಟೆಯ ಅಂಗಿಗಳನ್ನು ಮತ್ತು ಮೂವತ್ತು ವಿಶೇಷ ವಸ್ತ್ರಗಳನ್ನು ಕೊಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಸೋನನು ಇವರಿಗೆ, “ ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.
Kannada BSI Bible 2016
ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಸೋನನು ಇವರಿಗೆ - ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.
Kannada Bible (KNCL) BSI 2016
ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಡಿಸಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷ ವಸ್ತ್ರಗಳನ್ನೂ ಕೊಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ಸಂಸೋನನು, “ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ಹೇಳಿದರೆ, ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡುವೆನು.