Judges 14:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಉತ್ತರ ಹೇಳಲು ನಿಮಗೆ ಸಾಧ್ಯವಾಗದಿದ್ದರೆ ನೀವು ನನಗೆ ಮೂವತ್ತು ನಾರುಬಟ್ಟೆಯ ಅಂಗಿಗಳನ್ನು ಮತ್ತು ಮೂವತ್ತು ವಿಶೇಷ ವಸ್ತ್ರಗಳನ್ನು ಕೊಡಬೇಕು” ಎಂದು ಹೇಳಿದನು. ಆ ಮೂವತ್ತು ಜನರು, “ನಮಗೆ ನಿನ್ನ ಒಗಟನ್ನು ಹೇಳು, ನಾವು ಅದನ್ನು ಕೇಳಬಯಸುತ್ತೇವೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವಂಗಿಗಳನ್ನು (ದುಪ್ಪಟಿಗಳನ್ನೂ), ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಅನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ” ಎಂದು ಹೇಳಿದರು.
Kannada BSI Bible 2016
ಅದರ ಅರ್ಥವನ್ನು ನೀವು ನನಗೆ ಹೇಳದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತುವಸ್ತ್ರ ಗಳನ್ನೂ ಕೊಡಬೇಕು ಅಂದನು. ಅವರು ಅವನಿಗೆನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು ಅನ್ನಲು ಅವರು ಅವನಿಗೆ - ನಿನ್ನ ಒಗಟನ್ನು ಹೇಳು, ಕೇಳೋಣ ಎಂದು ಹೇಳಿದರು.
Kannada Bible (KNCL) BSI 2016
ನಿಮ್ಮಿಂದ ಆಗದೆಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಎನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಿಂದ ಗ್ರಹಿಸಲು ಆಗದೆ ಹೋದರೆ, ನೀವು ನನಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡಬೇಕು,” ಎಂದನು. ಅವರು ಅವನಿಗೆ, “ನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ,” ಎಂದರು.