Judges 14:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಲ್ಕನೆಯ ದಿನ13 ಅವರು ಸಂಸೋನನ ಹೆಂಡತಿಯಲ್ಲಿಗೆ ಬಂದು, “ನೀನು ನಮ್ಮನ್ನು ಬಡವರನ್ನಾಗಿ ಮಾಡಲು ಇಲ್ಲಿಗೆ ಕರೆದಿರುವಿಯಾ? ನೀನು ನಿನ್ನ ಗಂಡನನ್ನು ಮರುಳುಗೊಳಿಸಿ ನಮಗೆ ಒಗಟಿನ ಅರ್ಥವನ್ನು ಹೇಳುವಂತೆ ಮಾಡು. ನೀನು ನಮಗೆ ಒಗಟಿನ ಅರ್ಥವನ್ನು ಹೇಳದಿದ್ದರೆ ನಾವು ನಿನ್ನನ್ನು ಮತ್ತು ನಿನ್ನ ತಂದೆಯ ಮನೆಯಲ್ಲಿರುವ ಎಲ್ಲರನ್ನೂ ಸುಟ್ಟುಹಾಕುತ್ತೇವೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು.
Kannada BSI Bible 2016
ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ - ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವದೆಲ್ಲವನ್ನೂ ಕಸಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ ಅಂದರು.
Kannada Bible (KNCL) BSI 2016
ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುತ್ತೇವೆ; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಲ್ಕನೆಯ ದಿವಸದಲ್ಲಿ ಅವರು ಸಂಸೋನನ ಹೆಂಡತಿಗೆ, “ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡದ ಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರಳುಗೊಳಿಸು. ನೀನು ನಮಗಿರುವುದೆಲ್ಲವನ್ನು ಕಸಿದುಕೊಳ್ಳುವುದಕ್ಕೆ ಅಲ್ಲವೇ ನಮ್ಮನ್ನು ಇಲ್ಲಿಗೆ ಕರೆಸಿದೆ?” ಎಂದರು.