Judges 14:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಂಸೋನನ ಹೆಂಡತಿಯು ಅವನ ಹತ್ತಿರ ಹೋಗಿ ಅಳುವುದಕ್ಕೆ ಪ್ರಾರಂಭಿಸಿದಳು. ಅವಳು, “ನೀನು ನನ್ನನ್ನು ನಿಜವಾಗಿ ಪ್ರೀತಿಸುವುದಿಲ್ಲ, ನನ್ನನ್ನು ದ್ವೇಷಿಸುತ್ತಿ; ನೀನು ನಮ್ಮ ಜನರಿಗೆ ಒಗಟನ್ನು ಹೇಳಿರುವೆ; ಆದರೆ ಅದರ ಅರ್ಥವನ್ನು ನನಗೆ ಹೇಳಿಲ್ಲ” ಎಂದು ಗೋಳಾಡತೊಡಗಿದಳು. ಅದಕ್ಕೆ ಸಂಸೋನನು, “ನಾನು ನನ್ನ ತಂದೆತಾಯಿಯರಿಗೆ ಅದನ್ನು ತಿಳಿಸಲಿಲ್ಲ, ನಿನಗೆ ತಿಳಿಸುವೆನೋ?” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಸಂಸೋನನ ಮುಂದೆ ಅಳುತ್ತಾ, “ನೀನು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ತೊಂದರೆಪಡಿಸಿದಳು. ಅವನು ಆಕೆಗೆ, “ಅದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರ ಕೊಟ್ಟನು.
Kannada BSI Bible 2016
ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಸಂಸೋನನ ಮುಂದೆ ಅಳುತ್ತಾ - ನೀನು ನನ್ನನ್ನು ಪ್ರೀತಿಸುವದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ ಎಂದು ತೊಂದರೆಪಡಿಸಿದಳು. ಅವನು ಆಕೆಗೆ - ಅದನ್ನು ನನ್ನ ತಂದೆತಾಯಿಗಳಿಗೇ ಹೇಳಲಿಲ್ಲ; ನಿನಗೆ ಹೇಳುವೆನೋ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಆಕೆ ಸಂಸೋನನ ಮುಂದೆ ಅಳುತ್ತಾ, “ನೀವು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀರಷ್ಟೇ; ನನ್ನ ಜನರಿಗೆ ಒಗಟನ್ನು ಹೇಳಿದ್ದೀರಿ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ಪೀಡಿಸಿದಳು. ಅವನು ಆಕೆಗೆ, “ಇದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು, “ನನ್ನನ್ನು ಹಗೆ ಮಾಡುತ್ತಿರುವೆ. ನೀನು ನನ್ನನ್ನು ನಿಜವಾಗಿ ಪ್ರೀತಿ ಮಾಡುವುದಿಲ್ಲ, ಏಕೆಂದರೆ ನೀನು ನನ್ನ ಜನರಿಗೆ ಒಂದು ಒಗಟನ್ನು ಹೇಳಿ ನನಗೆ ತಿಳಿಸದೆ ಹೋದೆ,” ಎಂದಳು. ಅವನು ಅವಳಿಗೆ, “ಇಗೋ, ನಾನು ನನ್ನ ತಂದೆತಾಯಿಗೆ ಅದನ್ನು ತಿಳಿಸಲಿಲ್ಲ. ನಿನಗೆ ತಿಳಿಸುವೆನೋ?” ಎಂದನು.