Judges 14:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.
Kannada BSI Bible 2016
ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ರೇಗಿದವನಾಗಿ ತನ್ನ ತಂದೆಯ ಮನೆಗೆ ಹೋದನು.
Kannada Bible (KNCL) BSI 2016
ಸರ್ವೇಶ್ವರನ ಆತ್ಮ ಫಕ್ಕನೆ ಅವನ ಮೇಲೆ ಬಂದಿತು. ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲಿದುಕೊಂಡು ಒಗಟನ್ನು ಬಿಡಿಸಿದವರಿಗೆ ತಂದುಕೊಟ್ಟನು. ಬಳಿಕ ಕೋಪಗೊಂಡು ತನ್ನ ತಂದೆಯ ಮನೆಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ, ಅವನು ಅಷ್ಕೆಲೋನಿಗೆ ಹೋಗಿ, ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ, ಸುಲಿದುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತು ವಸ್ತ್ರಗಳನ್ನು ಕೊಟ್ಟನು.