Judges 14:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಮನೆಗೆ ಹಿಂದಿರುಗಿ ತನ್ನ ತಂದೆತಾಯಿಗಳಿಗೆ, “ನಾನು ತಿಮ್ನಾ ನಗರದಲ್ಲಿ ಫಿಲಿಷ್ಟಿಯರ ಸ್ತ್ರೀಯನ್ನು ನೋಡಿದ್ದೇನೆ. ನೀವು ಅವಳನ್ನು ನನಗೆ ಮದುವೆ ಮಾಡಿಸಿಕೊಡಿ” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ” ಎಂದು ಹೇಳಿದನು.
Kannada BSI Bible 2016
ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಿರಿಗಿ ತಂದೆತಾಯಿಗಳ ಬಳಿಗೆ ಬಂದು ಅವರಿಗೆ - ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ ಎಂದು ಹೇಳಿದನು.
Kannada Bible (KNCL) BSI 2016
ತಂದೆ ತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿ ಇದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾತಿನಲ್ಲಿ ಫಿಲಿಷ್ಟಿಯರ ಪುತ್ರಿಯರೊಳಗೆ ಒಬ್ಬ ಸ್ತ್ರೀಯನ್ನು ಕಂಡೆನು. ಈಗ ಅವಳನ್ನು ನನಗೆ ಮದುವೆ ಮಾಡಿರಿ,” ಎಂದನು.