Judges 14:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.
Kannada BSI Bible 2016
ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬದು ಅವನ ತಂದೆತಾಯಿಗಳಿಗೆ ಗೊತ್ತಿದ್ದಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ದೊರೆತನ ನಡಿಸುತ್ತಿದ್ದರು.
Kannada Bible (KNCL) BSI 2016
ಫಿಲಿಷ್ಟಿಯರ ದಂಡನೆಗೆ ಕಾರಣವನ್ನು ಹುಡುಕುತ್ತಿದ್ದ ಸರ್ವೇಶ್ವರನ ಪ್ರೇರಣೆಯಿಂದಲೇ ಇದೆಲ್ಲ ಸಂಭವಿಸಿತೆಂದು ಅವನ ತಂದೆತಾಯಿಗಳಿಗೆ ಗೊತ್ತಾಗಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು.