Judges 15:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯರು ಅವರಿಗೆ, “ಫಿಲಿಷ್ಟಿಯರಾದ ನೀವು ನಮ್ಮ ಸಂಗಡ ಯುದ್ಧ ಮಾಡುವುದಕ್ಕೆ ಇಲ್ಲಿಗೇಕೆ ಬಂದಿದ್ದೀರಿ?” ಎಂದು ಕೇಳಿದರು. ಅದಕ್ಕೆ ಅವರು, “ನಾವು ಸಂಸೋನನನ್ನು ಹಿಡಿಯಲು ಬಂದಿದ್ದೇವೆ. ನಾವು ಅವನನ್ನು ಬಂಧಿಸಬೇಕಾಗಿದೆ. ಅವನು ನಮ್ಮ ಜನರಿಗೆ ಮಾಡಿದ ದ್ರೋಹಕ್ಕಾಗಿ ಅವನನ್ನು ಶಿಕ್ಷಿಸಬೇಕು” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ ಎಂದು ಯೆಹೂದ್ಯರು ಅವರನ್ನು ಕೇಳಲು ಅವರು, “ಸಂಸೋನನನ್ನು ಹಿಡಿದು ಕಟ್ಟಿ ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು” ಎಂದು ಉತ್ತರಕೊಟ್ಟರು.
Kannada BSI Bible 2016
ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ ಎಂದು ಯೆಹೂದ್ಯರು ಅವರನ್ನು ಕೇಳಲು ಅವರು - ಸಂಸೋನನನ್ನು ಹಿಡಿದು ಕಟ್ಟಿ ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು ಎಂದು ಉತ್ತರಕೊಟ್ಟರು.
Kannada Bible (KNCL) BSI 2016
“ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ?” ಎಂದು ಯೆಹೂದ್ಯರು ಅವರನ್ನು ಕೇಳಿದರು. ಅವರು, “ಸಂಸೋನನನ್ನು ಹಿಡಿದು, ಬಂಧಿಸಿ, ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದಲ್ಲಿ ವಾಸಿಸುವ ಜನರು ಅವರಿಗೆ, “ನೀವು ನಮಗೆ ವಿರೋಧವಾಗಿ ಬಂದದ್ದೇನು?” ಎಂದರು. ಫಿಲಿಷ್ಟಿಯರು, “ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವುದಕ್ಕೆ, ಅವನನ್ನು ಹಿಡಿದು ಕಟ್ಟುವುದಕ್ಕೆ ಬಂದೆವು,” ಎಂದರು.