Judges 15:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.
Kannada BSI Bible 2016
ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.
Kannada Bible (KNCL) BSI 2016
ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಲೇಹಿಗೆ ಬಂದಾಗ, ಫಿಲಿಷ್ಟಿಯರು ಅವನ ಎದುರಾಗಿ ಆರ್ಭಟಿಸುತ್ತಾ ಬಂದರು. ಯೆಹೋವ ದೇವರ ಆತ್ಮ ಅವನ ಮೇಲೆ ಬಲವಾಗಿ ಬಂದದ್ದರಿಂದ, ಅವನ ತೋಳುಗಳಲ್ಲಿ ಕಟ್ಟಿದ್ದ ಸೆಣಬಿನ ಹಗ್ಗಗಳು ಬೆಂಕಿಯಲ್ಲಿ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಯಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.