Judges 15:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಂಸೋನನಿಗೆ ತುಂಬ ನೀರಡಿಕೆಯಾಗಿತ್ತು. ಅವನು ಯೆಹೋವನಿಗೆ, “ನಾನು ನಿನ್ನ ಸೇವಕನಾಗಿದ್ದೇನೆ. ನೀನು ನನಗೆ ಈ ಮಹಾವಿಜಯವನ್ನು ಕೊಟ್ಟಿರುವೆ. ದಯವಿಟ್ಟು ಈಗ ನಾನು ನೀರಡಿಕೆಯಿಂದ ಸಾಯಲು ಬಿಡಬೇಡ. ಸುನ್ನತಿ ಮಾಡಿಸಿಕೊಂಡಿಲ್ಲದವರು ನನ್ನನ್ನು ಹಿಡಿದುಕೊಡುವಂತೆ ಮಾಡಬೇಡ” ಎಂದು ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು
Kannada BSI Bible 2016
ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವನು ಬಹಳ ದಾಹವುಳ್ಳವನಾಗಿ ಯೆಹೋವನಿಗೆ - ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟು ಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ ಎಂದು ಮೊರೆಯಿಡಲು
Kannada Bible (KNCL) BSI 2016
ಇದರಿಂದಾಗಿ ಸಂಸೋನನಿಗೆ ಬಹಳ ದಾಹವಾಯಿತು. ಅವನು ಸರ್ವೇಶ್ವರನಿಗೆ, “ನೀವು ನಿಮ್ಮ ದಾಸನ ಮುಖಾಂತರ ಇಂಥ ಮಹಾ ಜಯವನ್ನು ದಯಪಾಲಿಸಿದಿರಿ. ಆದರೆ ಈಗ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೇ?’ ಎಂದು ಮೊರೆಯಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ ಬಹಳ ಬಾಯಾರಿಕೆಯಾದದರಿಂದ ಅವನು ಯೆಹೋವ ದೇವರಿಗೆ ಮೊರೆಯಿಟ್ಟನು, “ನಿಮ್ಮ ಸೇವಕನಿಗೆ ನೀವು ಈ ಮಹಾ ರಕ್ಷಣೆಯನ್ನು ಕೊಟ್ಟಿದ್ದೀರಿ. ಈಗ ಬಾಯಾರಿಕೆಯಿಂದ ಬಳಲಿ, ಸುನ್ನತಿಯಾಗದ ಈ ಜನರ ಕೈಯಲ್ಲಿ ನಾನು ಬೀಳಬೇಕೋ?” ಎಂದನು.