Judges 15:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೆಹೀಯ ನೆಲದಲ್ಲಿ ಒಂದು ಸುರಂಗವಿದೆ. ದೇವರು ಆ ಸುರಂಗವನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದನು. ಸಂಸೋನನು ನೀರು ಕುಡಿದು ಪುನಃ ಚೈತನ್ಯ ಪಡೆದನು. ಆದ್ದರಿಂದ ಅವನು ಆ ನೀರಿನ ಬುಗ್ಗೆಗೆ ಏನ್ ಹಕ್ಕೋರೇ ಎಂದು ಕರೆದನು. ಅದು ಇಂದಿಗೂ ಲೆಹೀ ನಗರದಲ್ಲಿ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ.
Kannada BSI Bible 2016
ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್‌ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ.ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಲೆಹೀಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಕುಡಿದು ಪುನಃ ಚೈತನ್ಯ ಹೊಂದಿದನು. ಆದದರಿಂದ ಅದಕ್ಕೆ ಏನ್‍ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನವರೆಗೂ ಲೆಹೀಯಲ್ಲಿರುತ್ತದೆ.
Kannada Bible (KNCL) BSI 2016
ದೇವರು ಲೆಹೀಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದರು. ಅವನು ಕುಡಿದು ಪುನಃ ಚೇತನಗೊಂಡನು. ಆದುದರಿಂದ ಅದಕ್ಕೆ ‘ಏನ್ ಹಕ್ಕೋರೇ’ ಎಂದು ಹೆಸರಾಯಿತು; ಅದು ಇಂದಿನವರೆಗೂ ಲೆಹೀಯಲ್ಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರು ಲೇಹಿಯಲ್ಲಿ ಟೊಳ್ಳಾದ ಸ್ಥಳವನ್ನು ಸೀಳಿಬಿಟ್ಟರು. ಅದರೊಳಗಿಂದ ನೀರು ಹೊರಟು ಬಂತು. ಸಂಸೋನನು ಆ ನೀರನ್ನು ಕುಡಿದದ್ದರಿಂದ ಅವನ ಬಲ ತಿರುಗಿಬಂದು, ಅವನು ಚೇತರಿಸಿಕೊಂಡನು. ಆದ್ದರಿಂದ ಏನ್ ಹಕ್ಕೋರೇ ಎಂದು ಅದಕ್ಕೆ ಹೆಸರಾಯಿತು. ಈ ದಿವಸದವರೆಗೂ ಅದು ಲೇಹಿಯಲ್ಲಿ ಇದೆ.