Judges 15:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು. ಒಬ್ಬನು, “ತಿಮ್ನಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಮದುವೆಮಾಡಿಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ಇದನ್ನು ಮಾಡಿದವರು ಯಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಆಕೆಯನ್ನೂ, ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.
Kannada BSI Bible 2016
ಫಿಲಿಷ್ಟಿಯರು--ಇದನ್ನು ಮಾಡಿದವರು ಯಾರು ಅಂದರು. ಅದಕ್ಕೆ ಅವರು--ತಿಮ್ನಾ ಊರಿನ ಅಳಿಯ ನಾದ ಸಂಸೋನನು ಮಾಡಿದನು; ಯಾಕಂದರೆ ಇವನು ಅವನ ಹೆಂಡತಿಯನ್ನು ತಕ್ಕೊಂಡು ಅವನ ಜೊತೆ ಗಾರನಿಗೆ ಕೊಟ್ಟನು ಅಂದರು. ಆಗ ಫಿಲಿಷ್ಟಿಯರು ಬಂದು ಅವಳನ್ನೂ ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ಇದನ್ನು ಮಾಡಿದವರಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು ಬಂದು ಆಕೆಯನ್ನೂ ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.
Kannada Bible (KNCL) BSI 2016
ಫಿಲಿಷ್ಟಿಯರು ಇದನ್ನು ಮಾಡಿದವರಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವ ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಅಲ್ಲಿಗೆ ಬಂದು ಆಕೆಯನ್ನೂ ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರು, “ಇದನ್ನು ಮಾಡಿದವರು ಯಾರು?” ಎಂದರು. ಅದಕ್ಕೆ ಅವರು, “ತಿಮ್ನಾದವನ ಅಳಿಯನಾದ ಸಂಸೋನನು ಮಾಡಿದನು. ಏಕೆಂದರೆ ಇವನು ಅವನ ಹೆಂಡತಿಯನ್ನು ತೆಗೆದುಕೊಂಡು, ಅವನ ಜೊತೆಗಾರನಿಗೆ ಕೊಟ್ಟನು,” ಎಂದರು. ಆಗ ಫಿಲಿಷ್ಟಿಯರು ಬಂದು, ಅವಳನ್ನೂ, ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.