Judges 16:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೆಲೀಲಳು ಕೆಲವು ಹೊಸ ಹಗ್ಗಗಳನ್ನು ತೆಗೆದುಕೊಂಡು ಸಂಸೋನನನ್ನು ಬಿಗಿದುಕಟ್ಟಿದಳು. ಕೆಲವು ಜನರು ಪಕ್ಕದ ಕೋಣೆಯಲ್ಲಿ ಅಡಗಿಕೊಂಡಿದ್ದರು. ದೆಲೀಲಳು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಆದರೆ ಅವನು ದಾರಗಳನ್ನು ಕಿತ್ತುಹಾಕುವಂತೆ ಆ ಹಗ್ಗಗಳನ್ನು ಸುಲಭವಾಗಿ ಕಿತ್ತುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.
Kannada BSI Bible 2016
ಆಗ ದೆಲೀಲಳು ಹೊಸ ಹಗ್ಗಗಳನ್ನು ತಕ್ಕೊಂಡು ಅವುಗಳಿಂದ ಅವನನ್ನು ಕಟ್ಟಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆ ಹರಿದುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ - ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.
Kannada Bible (KNCL) BSI 2016
ಅವನು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೆಲೀಲಳು ಹೊಸ ಹಗ್ಗಗಳನ್ನು ತೆಗೆದುಕೊಂಡು, ಅವುಗಳಿಂದ ಅವನನ್ನು ಕಟ್ಟಿ, ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆಯೇ ಹರಿದುಬಿಟ್ಟನು.