Judges 16:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಂಸೋನನು ತನ್ನ ರಹಸ್ಯವನ್ನು ತಿಳಿಸಿದನೆಂದು ದೆಲೀಲಳಿಗೆ ಗೊತ್ತಾಯಿತು. ಅವಳು ಫಿಲಿಷ್ಟಿಯ ಅಧಿಪತಿಗಳಿಗೆ ಸಂದೇಶವನ್ನು ಕಳುಹಿಸಿದಳು. ಅವಳು, “ಸಂಸೋನನು ನನಗೆ ಎಲ್ಲವನ್ನು ಹೇಳಿದ್ದಾನೆ, ಮತ್ತೊಮ್ಮೆ ಬನ್ನಿ” ಎಂದು ಹೇಳಿದಳು. ಫಿಲಿಷ್ಟಿಯ ಅಧಿಪತಿಗಳು ದೆಲೀಲಳ ಬಳಿಗೆ ಬಂದರು. ಅವರು ಅವಳಿಗೆ ಕೊಡುವುದಾಗಿ ಹೇಳಿದ್ದ ಹಣವನ್ನು ತಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.
Kannada BSI Bible 2016
ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಈ ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ಇದೊಂದು ಸಾರಿ ಬನ್ನಿರಿ; ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ ಎಂದು ಹೇಳಿಸಿ ಕರಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.
Kannada Bible (KNCL) BSI 2016
ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಮುಖಂಡರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿ; ಅವರು ನನಗೆ ತಮ್ಮ ಹೃದಯವನ್ನೆಲ್ಲಾ ಬಿಚ್ಚಿದ್ದಾರೆ,” ಎಂದು ಹೇಳಿ ಕರೆಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೆಲೀಲಳು, ಅವನು ತನಗೆ ತನ್ನ ಹೃದಯಲ್ಲಿರುವುದನ್ನೆಲ್ಲಾ ತಿಳಿಸಿದ್ದಾನೆಂದು ಕಂಡು, ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ, “ನೀವು ಈ ಸಾರಿ ಬನ್ನಿರಿ. ಏಕೆಂದರೆ ಅವನು ತನ್ನ ಹೃದಯದಲ್ಲಿರುವುದನ್ನೆಲ್ಲಾ ನನಗೆ ತಿಳಿಸಿದನು,” ಎಂದು ಕರೆಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಅವಳ ಬಳಿಗೆ ಹಣವನ್ನು ತಮ್ಮ ಕೈಯಲ್ಲಿ ತೆಗೆದುಕೊಂಡು ಬಂದರು.