Judges 16:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ದೆಲೀಲಳು ಅವನನ್ನು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತನು. “ಮುಂಚಿನಂತೆಯೇ ನಾನು ತಪ್ಪಿಸಿಕೊಳ್ಳುವೆನು” ಎಂದು ಅವನು ತಿಳಿದಿದ್ದನು. ಆದರೆ ಯೆಹೋವನು ಅವನನ್ನು ಬಿಟ್ಟುಹೋಗಿದ್ದಾನೆಂಬುದು ಅವನಿಗೆ ಗೊತ್ತಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.
Kannada BSI Bible 2016
ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವಳು - ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆಂದು ಕೂಗಲು ಅವನು ಎಚ್ಚತ್ತು - ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.
Kannada Bible (KNCL) BSI 2016
ಅವನ ಶಕ್ತಿ ಇಂಗಿಹೋಯಿತು. ಆಗ ಅವಳು, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತು, “ಮುಂಚಿನಂತೆಯೇ ಈಗಲೂ ಕೊಸರಿಕೊಂಡು ಹೋಗುವೆನು,” ಎಂದುಕೊಂಡನು. ಆದರೆ ಸರ್ವೇಶ್ವರ ತನ್ನನ್ನು ಬಿಟ್ಟುಹೋಗಿ ಇದ್ದಾರೆಂಬುದು ಅವನಿಗೆ ತಿಳಿಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು, “ಮೊದಲಿನಂತೆಯೇ ನಾನು ಹೊರಗೆ ಹೋಗಿ ಬಿಡುಗಡೆಯಾಗುವೆನು,” ಎಂದುಕೊಂಡನು. ಆದರೆ ಯೆಹೋವ ದೇವರು ತನ್ನನ್ನು ಬಿಟ್ಟು ಹೋಗಿದ್ದಾರೆಂದು ಅವನು ಅರಿಯಲಿಲ್ಲ.