Judges 16:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.
Kannada BSI Bible 2016
ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ಅವನನ್ನು ಹಿಡಿದು ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಕಬ್ಬಿಣದ ಬೇಡಿಗಳನ್ನು ಹಾಕಿ ಸೆರೆಮನೆಯಲ್ಲಿ ಬೀಸುವದಕ್ಕೆ ಹಚ್ಚಿದರು.
Kannada Bible (KNCL) BSI 2016
ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಫಿಲಿಷ್ಟಿಯರು ಅವನನ್ನು ಹಿಡಿದು, ಅವನ ಕಣ್ಣುಗಳನ್ನು ಕಿತ್ತು, ಅವನನ್ನು ಗಾಜಕ್ಕೆ ಒಯ್ದು ಎರಡು ಕಂಚಿನ ಸಂಕೋಲೆಗಳನ್ನು ಹಾಕಿದರು. ಸೆರೆಮನೆಯಲ್ಲಿ ಅವನನ್ನು ಬೀಸುವುದಕ್ಕೆ ಹಚ್ಚಿದರು.