Judges 16:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಷ್ಟಿಯರು ಸಂಸೋನನನ್ನು ನೋಡಿದ ಕೂಡಲೇ ತಮ್ಮ ದೇವರನ್ನು ಸ್ತುತಿಸಿದರು. ಅವರು, “ಇವನು ನಮ್ಮ ಜನರನ್ನು ಹಾಳುಮಾಡಿದನು. ಇವನು ನಮ್ಮ ಅನೇಕ ಜನರನ್ನು ಕೊಂದನು. ಆದರೆ ನಮ್ಮ ದೇವರು ನಮ್ಮ ಶತ್ರುವನ್ನು ಸೆರೆಹಿಡಿಯಲು ಸಹಾಯ ಮಾಡಿದನು” ಎಂದು ಹಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಸಂಸೋನನನ್ನು ನೋಡಿದಾಗ, “ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು.
Kannada BSI Bible 2016
ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಸಂಸೋನನನ್ನು ನೋಡಿ - ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದು ಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಗಾನಮಾಡಿದರು.
Kannada Bible (KNCL) BSI 2016
ಜನರು ಸಂಸೋನನನ್ನು ನೋಡಿ: ‘ನಮ್ಮ ದೇಶವನ್ನು ಹಾಳುಮಾಡಿದ, ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ, ಈ ಶತ್ರುವನ್ನು ನಮ್ಮ ದೇವರೇ ನಮ್ಮ ಕೈಗೊಪ್ಪಿಸಿದ,’ ಎಂದು ಗಾನಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಸಂಸೋನನನ್ನು ನೋಡಿದಾಗ ತಮ್ಮ ದೇವರನ್ನು ಹೊಗಳಿದರು. ಏಕೆಂದರೆ, “ನಮ್ಮ ದೇಶವನ್ನು ಹಾಳು ಮಾಡಿ, ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ವೈರಿಯನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು.