Judges 16:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಉತ್ಸವದಲ್ಲಿ ಜನರು ಸಂತೋಷವಾಗಿದ್ದರು. ಅವರು, “ಸಂಸೋನನನ್ನು ಕರೆದು ತನ್ನಿ. ನಾವು ಅವನ ತಮಾಷೆಯನ್ನು ನೋಡಬೇಕು” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ತಂದು ಅವನನ್ನು ಅಪಹಾಸ್ಯ ಮಾಡಿದರು. ಸಂಸೋನನನ್ನು ಅವರ ದೇವರಾದ ದಾಗೋನನ ಮಂದಿರದಲ್ಲಿ ಎರಡು ಕಂಬಗಳ ಮಧ್ಯದಲ್ಲಿ ನಿಲ್ಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.
Kannada BSI Bible 2016
ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆನಂದಲಹರಿಯಲ್ಲಿದ್ದಾಗ - ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು; ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದಮಾಡಬೇಕಾಯಿತು.
Kannada Bible (KNCL) BSI 2016
ಅವರು ಆನಂದಲಹರಿಯಲ್ಲಿದ್ದಾಗ, “ನಮ್ಮ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿ,” ಎಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ಅವರೆಲ್ಲರ ಮನರಂಜಿಸಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಅವರು ಸಂಭ್ರಮವಾಗಿರುವಾಗ, “ನಮ್ಮ ಮುಂದೆ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿರಿ,” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರೆತಂದಾಗ, ಅವನು ಅವರ ಮುಂದೆ ವಿನೋದ ಮಾಡಬೇಕಾಯಿತು. ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.