Judges 16:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ಸೇವಕನು ಸಂಸೋನನ ಕೈಯನ್ನು ಹಿಡಿದುಕೊಂಡಿದ್ದನು. “ಈ ಮಂದಿರಕ್ಕೆ ಆಧಾರವಾಗಿರುವ ಕಂಬಗಳ ಹತ್ತಿರ ನನ್ನನ್ನು ಕರೆದುಕೊಂಡು ಹೋಗು. ನಾನು ಅವುಗಳಿಗೆ ಒರಗಿಕೊಳ್ಳುತ್ತೇನೆ” ಎಂದು ಸಂಸೋನನು ಅವನನ್ನು ಕೇಳಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುವ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ” ಅಂದನು.
Kannada BSI Bible 2016
ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ--ಮನೆ ಯನ್ನು ಹೊತ್ತಿರುವ ಸ್ತಂಭಗಳನ್ನು ನಾನು ಸ್ಪರ್ಶಿಸಿ ಅವುಗಳ ಮೇಲೆ ಆತುಕೊಳ್ಳುವಹಾಗೆ ನನ್ನನ್ನು ಬಿಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಂಸೋನನು ತನ್ನನ್ನು ಕೈಹಿಡಿದು ನಡಿಸುವ ಹುಡುಗನಿಗೆ - ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ ಅಂದನು.
Kannada Bible (KNCL) BSI 2016
ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುತ್ತಿದ್ದ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ, “ಈ ಕಟ್ಟಡದ ಆಧಾರ ಸ್ತಂಭಗಳನ್ನು ನಾನು ಸ್ಪರ್ಶಿಸಿ, ಅವುಗಳ ಮೇಲೆ ಆತುಕೊಳ್ಳುವ ಹಾಗೆ ನನ್ನನ್ನು ಬಿಡು,” ಎಂದನು.