Judges 16:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮಂದಿರದಲ್ಲಿ ಗಂಡಸರು ಹೆಂಗಸರು ಕಿಕ್ಕಿರಿದು ನೆರೆದಿದ್ದರು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಮಾಳಿಗೆಯ ಮೇಲೆ ಸುಮಾರು ಮೂರು ಸಾವಿರ ಹೆಂಗಸರು ಮತ್ತು ಗಂಡಸರು ಇದ್ದರು. ಅವರು ನಕ್ಕು ಸಂಸೋನನನ್ನು ಅಪಹಾಸ್ಯ ಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.
Kannada BSI Bible 2016
ಆ ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿಯುತ್ತಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.
Kannada Bible (KNCL) BSI 2016
ಆ ಮನೆ ಸ್ತ್ರೀಪುರುಷರಿಂದ ಕಿಕ್ಕಿರಿದಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಸಂಸೋನನು ತೋರಿಸುತ್ತಿದ್ದ ಮನೋರಂಜನಾ ಕಾರ್ಯಗಳನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನೆಯು ಸ್ತ್ರೀಪುರುಷರಿಂದ ತುಂಬಿತ್ತು. ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡುವುದನ್ನು ಕಾಣುವುದಕ್ಕೆ ಮಾಳಿಗೆಯ ಮೇಲೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಸ್ತ್ರೀ ಪುರುಷರಿದ್ದರು.