Judges 16:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಸಂಸೋನನು ಯೆಹೋವನಿಗೆ, “ಸರ್ವಶಕ್ತನಾದ ಯೆಹೋವನೇ, ನನ್ನ ಕಡೆಗೆ ಗಮನ ಹರಿಸು. ದೇವರೇ, ದಯವಿಟ್ಟು ನನಗಿನ್ನೊಂದು ಸಲ ಶಕ್ತಿಯನ್ನು ಕೊಡು. ಫಿಲಿಷ್ಟಿಯರು ನನ್ನ ಎರಡು ಕಣ್ಣುಗಳನ್ನು ಕಿತ್ತುಹಾಕಿದ್ದಕ್ಕೆ ಇದೊಂದು ಸಲ ಅವರನ್ನು ಶಿಕ್ಷಿಸುತ್ತೇನೆ” ಎಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,
Kannada BSI Bible 2016
ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು,
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಂಸೋನನು ಯೆಹೋವನಿಗೆ - ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು ಎಂದು ಮೊರೆಯಿಟ್ಟು
Kannada Bible (KNCL) BSI 2016
ಆಗ ಸಂಸೋನನು ಸರ್ವೇಶ್ವರನಿಗೆ, “ಪ್ರಭು ಸರ್ವೇಶ್ವರಾ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡು ಕಣ್ಣುಗಳಲ್ಲಿ ಒಂದಕ್ಕಾದರು ನಾನು ಅವರಿಗೆ ಮುಯ್ಯಿ ತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸಿರಿ,” ಎಂದು ಮೊರೆಯಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಂಸೋನನು ಯೆಹೋವ ದೇವರನ್ನು ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನಾನು ನನ್ನ ಎರಡು ಕಣ್ಣುಗಳಿಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸಿ ದೇವರೇ,”