Judges 16:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಸಂಸೋನನು ಆ ವೇಶ್ಯೆಯ ಜೊತೆಯಲ್ಲಿ ಮಧ್ಯರಾತ್ರಿಯವರೆಗೆ ಮಾತ್ರ ಇದ್ದನು. ಸಂಸೋನನು ಮಧ್ಯರಾತ್ರಿಯಲ್ಲಿ ಎದ್ದುಬಿಟ್ಟನು. ಸಂಸೋನನು ನಗರ ದ್ವಾರದ ಬಾಗಿಲನ್ನು ಗಟ್ಟಿಯಾಗಿ ಹಿಡಿದು ಎಳೆದನು. ಕದಗಳು ಗೋಡೆಗಳಿಂದ ಕಿತ್ತುಬಂದವು. ಸಂಸೋನನು ಬಾಗಿಲಕದಗಳನ್ನೂ ಅದರ ನಿಲುವುಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ತನ್ನ ಹೆಗಲ ಮೇಲೆ ಹೊತ್ತು ಹೆಬ್ರೋನ್ ನಗರದ ಹತ್ತಿರವಿರುವ ಪರ್ವತ ಶಿಖರಕ್ಕೆ ತೆಗೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು.
Kannada BSI Bible 2016
ಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರುಬಾಗಲಿನ ಕದಗಳನ್ನೂ ಅದರ ಎರಡು ನಿಲುವು ಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ಹೆಗಲಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತದ ಶಿಖರದ ಮೇಲೆ ಇಟ್ಟನು.
Kannada Bible (KNCL) BSI 2016
ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರಬಾಗಿಲುಗಳನ್ನೂ ಕದಗಳನ್ನೂ ಅದರ ಎರಡು ನಿಲುವು ಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಬೆಟ್ಟದ ತುದಿಯ ಮೇಲೆ ಇಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಸೋನನು ಅರ್ಧ ರಾತ್ರಿಯವರೆಗೆ ಮಲಗಿದ್ದು, ಮಧ್ಯರಾತ್ರಿಯಲ್ಲಿ ಎದ್ದು, ಪಟ್ಟಣದ ಬಾಗಿಲ ಕದಗಳನ್ನೂ, ಅದರ ಎರಡು ತೋಳುಗಳನ್ನೂ ಹಿಡಿದು, ಅಗುಳಿ ಸಹ ಕಿತ್ತು, ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ, ಹೆಬ್ರೋನಿಗೆ ಎದುರಾಗಿರುವ ಪರ್ವತದ ಶಿಖರದ ಮೇಲಕ್ಕೆ ಹೋದನು.