Judges 16:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಸಂಸೋನನು, “ಬಿಲ್ಲಿನ ಏಳು ಹೊಸತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ಬಲಹೀನನಾಗುತ್ತೇನೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ಹೇಳಿದನು.
Kannada BSI Bible 2016
ಸಂಸೋನನು ಅವಳಿಗೆ--ಅವರು ನನ್ನನ್ನು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲು ಗಳಿಂದ ಕಟ್ಟಿದರೆ ನಾನು ಬಲಿಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ಕರುಳಿನ ಏಳು ಹಸೀ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು ಎಂದು ಹೇಳಿದನು.
Kannada Bible (KNCL) BSI 2016
ಅವನು, “ಕರುಳಿನ ಏಳು ಹಸಿ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಸೋನನು ಅವಳಿಗೆ, “ಅವರು ನನ್ನನ್ನು ಒಣಗದೆ ಇರುವ ಹಸುರಾದ ಏಳು ನಾರಿನ ಬರಲುಗಳಿಂದ ಕಟ್ಟಿದರೆ, ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು.