Judges 16:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಫಿಲಿಷ್ಟಿಯ ಅಧಿಪತಿಗಳು ದೆಲೀಲಳಿಗೆ ಬಿಲ್ಲಿನ ಏಳು ಹೊಸ ತಂತಿಗಳನ್ನು ತಂದುಕೊಟ್ಟರು. ಅವು ಇನ್ನೂ ಒಣಗಿರಲಿಲ್ಲ. ದೆಲೀಲಳು ಸಂಸೋನನನ್ನು ಬಿಲ್ಲಿನ ಆ ತಂತಿಗಳಿಂದ ಬಿಗಿದು ಕಟ್ಟಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯ ಪ್ರಭುಗಳು ಅಂಥ ಹಸೀ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು.
Kannada BSI Bible 2016
ಆಗ ಪಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯ ಪ್ರಭುಗಳು ಅಂಥ ಏಳು ಹಸೀ ತಂತಿಗಳನ್ನು ಅವಳಿಗೆ ತಂದುಕೊಟ್ಟರು.
Kannada Bible (KNCL) BSI 2016
ಫಿಲಿಷ್ಟಿಯರ ಮುಖಂಡರು ಅಂಥ ಏಳು ಹಸಿ ತಂತಿಗಳನ್ನು ಅವಳಿಗೆ ತಂದುಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿಯಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.