Judges 17:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮೀಕನು ಅವನಿಗೆ, “ನಮ್ಮಲ್ಲಿಯೇ ಇರು. ನಮಗೆ ತಂದೆಯೂ ಯಾಜಕನೂ ಆಗಿರು. ನಾನು ನಿನಗೆ ಪ್ರತಿವರ್ಷ ನಾಲ್ಕು ಔನ್ಸ್ ಬೆಳ್ಳಿಯನ್ನೂ ಊಟವನ್ನೂ ವಸ್ತ್ರಗಳನ್ನೂ ಕೊಡುತ್ತೇನೆ” ಎಂದು ಹೇಳಿದನು. ಮೀಕನು ಹೇಳಿದಂತೆ ಆ ಲೇವಿಯು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ, ಯಾಜಕನೂ ಆಗು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನೂ, ಬಟ್ಟೆಯನ್ನೂ, ಆಹಾರವನ್ನೂ ಕೊಡುತ್ತೇನೆ” ಅನ್ನಲು
Kannada BSI Bible 2016
ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೀಕನು ಅವನಿಗೆ - ನೀನು ನಮ್ಮಲ್ಲಿರು; ನಮಗೆ ತಂದೆಯೂ ಯಾಜಕನೂ ಆಗು. ನಿನಗೆ ವರುಷಕ್ಕೆ ಹತ್ತು ರೂಪಾಯಿಗಳನ್ನೂ ಒಂದು ದುಸ್ತು ಬಟ್ಟೆಯನ್ನೂ ಆಹಾರವನ್ನೂ ಕೊಡುತ್ತೇನೆ ಅನ್ನಲು
Kannada Bible (KNCL) BSI 2016
ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ ಯಾಜಕನೂ ಆಗಿರು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನು, ಉಡಿಗೆತೊಡಿಗೆಯನ್ನು ಹಾಗು ಆಹಾರವನ್ನು ಕೊಡುತ್ತೇನೆ,” ಎನ್ನಲು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೀಕನು ಅವನಿಗೆ, “ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ, ಯಾಜಕನಾಗಿಯೂ ಇರು. ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ, ಒಂದು ದುಸ್ತು ವಸ್ತ್ರಗಳನ್ನೂ, ಆಹಾರವನ್ನೂ ಕೊಡುವೆನು,” ಎಂದನು. ಹಾಗೆಯೇ ಲೇವಿಯನು ಹೋದನು.