Judges 17:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೀಕನು ತನ್ನ ತಾಯಿಗೆ, “ಅಮ್ಮಾ, ಯಾರೋ ನಿನ್ನ ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ಕದ್ದಿದ್ದರಲ್ಲಾ, ನಿನಗೆ ನೆನಪಿದೆಯಾ? ನೀನು ಅದರ ಸಲುವಾಗಿ ಶಾಪಹಾಕುವದನ್ನು ನಾನು ಕೇಳಿದ್ದೆ. ನಾನು ಅದನ್ನು ತೆಗೆದುಕೊಂಡಿದ್ದೆ. ಇಗೋ ಆ ಬೆಳ್ಳಿ ನನ್ನ ಹತ್ತಿರ ಇದೆ” ಎಂದು ಹೇಳಿದನು. ಅವನ ತಾಯಿಯು ಅವನಿಗೆ, “ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಅಂದಳು.
Kannada BSI Bible 2016
ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಂದಾನೊಂದು ದಿವಸ ತನ್ನ ತಾಯಿಗೆ - ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ; ಇಗೋ, ಆ ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು ಎಂದು ಹೇಳಲು ಆಕೆಯು - ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಅಂದಳು.
Kannada Bible (KNCL) BSI 2016
ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ಬೆಳ್ಳಿ ನಾಣ್ಯಗಳಿಗಾಗಿ ನೀನು ನನಗೆ ಕೇಳಿಸುವಂತೆ ಶಪಿಸಿದೆಯಲ್ಲವೆ? ಇಗೋ, ಆ ನಾಣ್ಯಗಳು ನನ್ನ ಹತ್ತಿರವೇ ಇವೆ; ನಾನೇ ತೆಗೆದುಕೊಂಡಿದ್ದೇನೆ,” ಎಂದು ಹೇಳಿದನು. ಆಕೆ, “ನನ್ನ ಮಗನೇ, ಸರ್ವೇಶ್ವರಸ್ವಾಮಿ ನಿನ್ನನ್ನು ಆಶೀರ್ವದಿಸಲಿ!” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ತಾಯಿಗೆ, “ನಿನ್ನ ಬಳಿಯಿಂದ ಸಾವಿರದ ನೂರು ಬೆಳ್ಳಿ ನಾಣ್ಯಗಳು ಕಳುವಾದಾಗ, ನೀನು ಆ ಹಣವನ್ನು ಕುರಿತು ಶಪಿಸಿದೆಯಲ್ಲಾ? ಇಗೋ, ಆ ನಾಣ್ಯಗಳು ನನ್ನ ಬಳಿಯಲ್ಲಿ ಇವೆ. ನಾನೇ ಅದನ್ನು ತೆಗೆದುಕೊಂಡೆನು,” ಎಂದನು. ಅದಕ್ಕೆ ಅವನ ತಾಯಿ, “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದಳು.