Judges 17:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೀಕನು ಅವನನ್ನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. ಆ ತರುಣನು, “ನಾನು ಯೆಹೂದ ಪ್ರದೇಶದ ಬೆತ್ಲೆಹೇಮಿನವನಾದ ಲೇವಿಯನು. ನಾನು ವಾಸಮಾಡುವುದಕ್ಕೆ ಒಂದು ಸ್ಥಳವನ್ನು ಹುಡುಕುತ್ತಿದ್ದೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಎಲ್ಲಿಂದ ಬಂದಿ” ಎಂದು ಮೀಕನು ಅವನನ್ನು ಕೇಳಲು ಅವನು, “ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು; ಉಪಜೀವನಕ್ಕೆ ಅನುಕೂಲವಾದ ವಾಸಸ್ಥಳವನ್ನು ಹುಡುಕಿಕೊಂಡು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಎಲ್ಲಿಂದ ಬಂದಿ ಎಂದು ಮೀಕನು ಅವನನ್ನು ಕೇಳಲು ಅವನು - ನಾನು ಯೆಹೂದದ ಬೇತ್ಲೆಹೇವಿುನವನಾದ ಲೇವಿಯನು; ಉಪಜೀವನಕ್ಕೆ ಅನುಕೂಲವಾಗುವಲ್ಲಿ ವಾಸಿಸಬೇಕೆಂದು ಹೊರಟಿದ್ದೇನೆ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
‘ನೀನು ಎಲ್ಲಿಂದ ಬಂದೆ?’ ಎಂದು ಮೀಕನು ಅವನನ್ನು ಕೇಳಿದನು. ಅವನು, “ನಾನು ಯೆಹೂದದ ಬೆತ್ಲೆಹೇಮಿನವನಾದ ಲೇವಿಯನು; ಜೀವನಕ್ಕೆ ಅನುಕೂಲವಾದ ಬೇರೆಲ್ಲಾದರು ವಾಸಿಸಬೇಕೆಂದು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೀಕನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದನು. ಅವನು ಮೀಕನಿಗೆ, “ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು. ನನಗೆ ಸ್ಥಳ ಸಿಕ್ಕಲ್ಲಿ ಪ್ರವಾಸಿಯಾಗಬೇಕೆಂದು ಹೊರಟಿದ್ದೇನೆ,” ಎಂದನು.