Judges 18:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಆ ಸ್ಥಳಕ್ಕೆ ಬಂದಮೇಲೆ ಅಲ್ಲಿ ಸಾಕಷ್ಟು ಭೂಮಿ ಇದೆ ಎಂಬುದನ್ನು ಅರಿತುಕೊಳ್ಳುತ್ತೀರಿ. ಅಲ್ಲಿ ಎಲ್ಲವೂ ಸಮೃದ್ಧಿಕರವಾಗಿದೆ. ಅಲ್ಲಿಯ ಜನರಿಗೆ ಶತ್ರುಗಳು ಧಾಳಿ ಮಾಡಬಹುದೆಂಬ ಭಯವೇ ಇಲ್ಲ. ಖಂಡಿತವಾಗಿಯೂ ದೇವರು ಆ ಭೂಮಿಯನ್ನು ನಮಗೆ ಕೊಟ್ಟಿದ್ದಾನೆ” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ” ಅಂದರು.
Kannada BSI Bible 2016
ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಅಲ್ಲಿಗೆ ಹೋಗುವದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶವು ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ ಅಂದರು.
Kannada Bible (KNCL) BSI 2016
ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶ ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ. ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅಲ್ಲಿಗೆ ತಲುಪಿದಾಗ, ಸಂಶಯಪಡದ ಜನರನ್ನು ಅಲ್ಲಿ ಕಾಣುವಿರಿ. ಅದು ವಿಸ್ತಾರವಾದ ದೇಶವಾಗಿದೆ. ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ಆ ಪ್ರದೇಶದಲ್ಲಿ ಯಾವ ಕೊರತೆಯು ಇರುವುದಿಲ್ಲ,” ಎಂದರು.