Judges 18:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಐದು ಜನ ಗೂಢಚಾರರು ಮನೆಯೊಳಗೆ ಪ್ರವೇಶ ಮಾಡಿದರು. ಯಾಜಕನು ಹೊರಗೆ ಬಾಗಿಲ ಬಳಿಯಲ್ಲಿ ಯುದ್ಧ ಸನ್ನದ್ಧರಾದ ಆರುನೂರು ಜನರ ಸಂಗಡ ನಿಂತಿದ್ದನು. ಆಗ ಆ ಐದು ಮಂದಿ ಮನೆಯೊಳಗೆ ಹೋಗಿ ಕೆತ್ತನೆಯ ವಿಗ್ರಹವನ್ನೂ ಏಫೋದನ್ನೂ ಬೆಳ್ಳಿವಿಗ್ರಹಗಳನ್ನೂ ಗೃಹದೇವತೆಗಳ ವಿಗ್ರಹಗಳನ್ನೂ ತೆಗೆದುಕೊಂಡರು. ಅವರನ್ನು ಕಂಡ ತರುಣ ಲೇವಿಯು, “ನೀವು ಏನು ಮಾಡುತ್ತಿದ್ದೀರಿ?” ಎಂದು ಕೇಳಿದನು. (Verses 17-18)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.
Kannada BSI Bible 2016
ಆದರೆ ದೇಶವನ್ನು ಪಾಳತಿ ನೋಡಿ ಬಂದ ಆ ಐದು ಮಂದಿ ಹೋಗಿ ಒಳಗೆ ಹೊಕ್ಕು ಕೆತ್ತಿದ ವಿಗ್ರಹವನ್ನೂ ಏಫೋದನ್ನೂ ಪ್ರತಿಮೆ ಗಳನ್ನೂ ಎರಕದ ವಿಗ್ರಹವನ್ನೂ ತಕ್ಕೊಂಡರು. ಆಗ ಯಾಜಕನೂ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಪ್ರವೇಶ ದ್ವಾರದಲ್ಲಿ ನಿಂತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನೂ ಬಂದು ಇವರೊಡನೆ ಬಾಗಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ಏಫೋದನ್ನೂ ದೇವತಾ ಪ್ರತಿಮೆಗಳನ್ನೂ ತೆಗೆದುಕೊಂಡರು.
Kannada Bible (KNCL) BSI 2016
ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ‘ಏಫೋದ’ನ್ನೂ ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಒಳಗೆ ಹೋಗಿ, ಕೆತ್ತಿದ ವಿಗ್ರಹವನ್ನೂ, ಏಫೋದನ್ನೂ, ಪ್ರತಿಮೆಗಳನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡರು. ಆಗ ಯಾಜಕನೂ, ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಬಾಗಿಲ ಬಳಿಯಲ್ಲಿ ನಿಂತಿದ್ದರು.