Judges 18:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೀಕನು, “ದಾನ್ಯರಾದ ನೀವು ನನ್ನ ವಿಗ್ರಹಗಳನ್ನು ತೆಗೆದುಕೊಂಡಿದ್ದೀರಿ. ಆ ವಿಗ್ರಹಗಳನ್ನು ನಾನು ನನಗೋಸ್ಕರ ಮಾಡಿಸಿದ್ದೆ. ನೀವು ನನ್ನ ಯಾಜಕನನ್ನು ಸಹ ತೆಗೆದುಕೊಂಡಿದ್ದೀರಿ. ನನ್ನ ಹತ್ತಿರ ಈಗ ಏನು ಉಳಿದಿದೆ? ಹೀಗೆಲ್ಲ ಮಾಡಿ ನೀವು ನನಗೆ, ‘ನಿನಗೇನಾಗಿದೆ?’ ಎಂದು ಕೇಳಬಹುದೇ?” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.
Kannada BSI Bible 2016
ಅವನು--ನಾನು ಮಾಡಿಕೊಂಡ ನನ್ನ ದೇವರು ಗಳನ್ನೂ ಯಾಜಕನನ್ನೂ ತಕ್ಕೊಂಡು ಹೋದಿರಿ; ಇನ್ನು ನನಗೆ ಏನದೆ? ನೀವು ನನ್ನನ್ನು--ನಿನಗೆ ಏನಾಯಿತೆಂದು ಕೇಳುವದೇನು? ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವದು ಹೇಗೆ ಅಂದನು.
Kannada Bible (KNCL) BSI 2016
ಅವನು, “ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವೇ ನನ್ನನ್ನು ಕೇಳುವುದು ಹೇಗೆ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ನಾನು ಮಾಡಿಕೊಂಡ ನನ್ನ ದೇವರುಗಳನ್ನೂ, ಯಾಜಕನನ್ನೂ ತೆಗೆದುಕೊಂಡು ಹೋದಿರಿ. ಇನ್ನು ನನಗೆ ಏನಿದೆ? ನೀವು ನನ್ನನ್ನು, ‘ನಿನಗೆ ಏನಾಯಿತೆಂದು ಕೇಳುವುದೇನು?’ ಎಂದನು.”
Recommended Reading