Judges 18:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ದಾನ್ಯರು, “ನೀನು ನಮ್ಮ ಜೊತೆ ವಾದವಿವಾದ ಮಾಡದಿರುವುದೇ ಒಳ್ಳೆಯದು. ನಮ್ಮಲ್ಲಿ ಬಹಳ ಸಿಟ್ಟಿನ ಕೆಲವರಿದ್ದಾರೆ. ನೀನು ಹೀಗೆ ಕೂಗಾಡಿದರೆ ಅವರು ನಿಮ್ಮ ಮೇಲೆ ಧಾಳಿ ಮಾಡಬಹುದು. ಆಗ ನೀನು ಮತ್ತು ನಿನ್ನ ಕುಟುಂಬದವರು ಸತ್ತು ಹೋಗುವಿರಿ” ಎಂದು ಪ್ರತ್ಯುತ್ತರ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ತುಂಬಾ ಕೋಪಿಸಿಕೊಳ್ಳುವವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ, ನಿನ್ನ ಮನೆಯವರೂ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಬಾಯಿಮುಚ್ಚಿಕೊಂಡು ಹೋಗು” ಎಂದು ಹೇಳಿ ಮುಂದೆ ನಡೆದರು.
Kannada BSI Bible 2016
ಆದರೆ ದಾನ್ಯರು ಅವ ನಿಗೆ--ಕೋಪಿಷ್ಠರು ನಿನ್ನ ಮೇಲೆ ಬೀಳದ ಹಾಗೆ, ನೀನು ನಿನ್ನ ಪ್ರಾಣವನ್ನೂ ನಿನ್ನ ಮನೆಯವರ ಪ್ರಾಣ ವನ್ನೂ ಕಳಕೊಳ್ಳದ ಹಾಗೆ, ನಿನ್ನ ಸ್ವರ ನಮ್ಮಲ್ಲಿ ಕೇಳಿ ಸದೆ ಇರಲಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನ್ಯರು ಅವನಿಗೆ - ನಮ್ಮಲ್ಲಿ ಕೆಲವರು ಸಿಟ್ಟಿನವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ ನಿನ್ನ ಮನೆಯವರೂ ಪ್ರಾಣನಷ್ಟಪಟ್ಟೀರಿ; ಆದದರಿಂದ ಬಾಯಿಮುಚ್ಚಿಕೊಂಡು ಹೋಗು ಎಂದು ಹೇಳಿ ಮುಂದೆ ನಡೆದರು.
Kannada Bible (KNCL) BSI 2016
ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ಸಿಟ್ಟಿನವರು. ಅವರು ನಿಮ್ಮ ಮೇಲೆ ಬಿದ್ದರೆ ನೀನೂ ನಿನ್ನ ಮನೆಯವರೂ ಪ್ರಾಣನಷ್ಟಪಡುವಿರಿ. ಆದುದರಿಂದ ಬಾಯಿಮುಚ್ಚಿಕೊಂಡು ಹೋಗಿ,” ಎಂದು ಹೇಳಿ ಮುಂದೆ ನಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದಾನನ ಮಕ್ಕಳು ಅವನಿಗೆ, “ಕೋಪಿಷ್ಟರು ನಿನ್ನ ಮೇಲೆ ಬೀಳದ ಹಾಗೆ ನೀನು ನಿನ್ನ ಪ್ರಾಣವನ್ನೂ, ನಿನ್ನ ಮನೆಯವರ ಪ್ರಾಣವನ್ನೂ ಕಳೆದುಕೊಳ್ಳದ ಹಾಗೆ ನಿನ್ನ ಶಬ್ದ ನಮಗೆ ಕೇಳಿಸದೆ ಇರಲಿ,” ಎಂದರು.