Judges 18:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಐದು ಜನರು ಮೀಕನ ಮನೆಯ ಸಮೀಪಕ್ಕೆ ಬಂದಾಗ ತರುಣನಾಗಿದ್ದ ಲೇವಿಯ ಧ್ವನಿಯನ್ನು ಕೇಳಿ ಗುರುತಿಸಿದರು. ಆದ್ದರಿಂದ ಅವರು ಮೀಕನ ಮನೆಯಲ್ಲಿ ಇಳಿದುಕೊಂಡು ಆ ತರುಣನಿಗೆ, “ನಿನ್ನನ್ನು ಇಲ್ಲಿಗೆ ಯಾರು ಕರೆದುತಂದರು? ನೀನು ಇಲ್ಲಿ ಏನು ಮಾಡುತ್ತಿರುವೆ? ಇಲ್ಲಿ ನಿನ್ನ ಉದ್ಯೋಗವೇನು?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತನಾಡುವುದನ್ನು ಕೇಳಿ, ಗುರುತುಹಿಡಿದು, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ” ಎಂದು ಅವನನ್ನು ಕೇಳಲು ಅವನು,
Kannada BSI Bible 2016
ಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತಾಡುವದನ್ನು ಕೇಳಿ ಗುರುತುಹಿಡಿದು ಅವನ ಬಳಿಗೆ ಹೋಗಿ - ನಿನ್ನನ್ನು ಇಲ್ಲಿಗೆ ಕರತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ ಎಂದು ಅವನನ್ನು ಕೇಳಲು ಅವನು,
Kannada Bible (KNCL) BSI 2016
ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತಾಡುವುದನ್ನು ಕೇಳಿ ಗುರುತು ಹಿಡಿದು ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತಿರುವೆ? ಏನು ಸಂಬಳ ಸಿಕ್ಕುತ್ತಿದೆ?” ಎಂದು ಅವನನ್ನು ವಿಚಾರಿಸಿದರು. ಅವನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮೀಕನ ಮನೆಯ ಬಳಿಯಲ್ಲಿರುವಾಗ, ಲೇವಿಯ ಯುವಕನ ಸ್ವರ ಗುರುತಿಸಿ, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆದುಕೊಂಡು ಬಂದವನು ಯಾರು? ಇಲ್ಲಿ ನೀನು ಏನು ಮಾಡುತ್ತೀ? ಏಕೆ ನೀನು ಇಲ್ಲಿರುವೆ?” ಎಂದರು.