Judges 18:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾನ್ಯರು ದಾನ್ ನಗರದಲ್ಲಿ ಆ ವಿಗ್ರಹಗಳನ್ನು ಪ್ರತಿಷ್ಠಾಪಿಸಿದರು. ಅವರು ಗೇರ್ಷೋಮನ ಮಗನಾದ ಯೆಹೋನಾತಾನನನ್ನು ತಮ್ಮ ಯಾಜಕನನ್ನಾಗಿ ಮಾಡಿಕೊಂಡರು. ಗೇರ್ಷೋಮನು ಮೋಶೆಯ ಮಗನಾಗಿದ್ದನು. ಇಸ್ರೇಲರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗುವವರೆಗೆ ಯೆಹೋನಾತಾನನು ಮತ್ತು ಅವನ ಮಕ್ಕಳು ದಾನ್ಯರ ಯಾಜಕರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.
Kannada BSI Bible 2016
ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲ್ಯರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.
Kannada Bible (KNCL) BSI 2016
ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ದಾನ್ಯರು ಕೆತ್ತಿದ ವಿಗ್ರಹವನ್ನು ತಮಗಾಗಿ ಸ್ಥಾಪಿಸಿಕೊಂಡರು. ಇಸ್ರಾಯೇಲರು ಸೆರೆಯಾಗಿ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ಅವನ ಮಕ್ಕಳೂ ದಾನನ ಗೋತ್ರದವರಿಗೆ ಯಾಜಕರಾಗಿದ್ದರು.