Judges 18:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಐದು ಜನ, “ನಾವು ಒಂದು ಪ್ರದೇಶವನ್ನು ಹುಡುಕಿದ್ದೇವೆ. ಅದು ಬಹಳ ಚೆನ್ನಾಗಿದೆ. ತಡಮಾಡುವುದು ಬೇಡ. ಬೇಗ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳೋಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳೋಣ.
Kannada BSI Bible 2016
ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ಆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ಆ ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕೂತುಕೊಳ್ಳುವದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವತಂತ್ರಿಸಿಕೊಳ್ಳೋಣ.
Kannada Bible (KNCL) BSI 2016
ಅವರು, “ಏಳಿ, ಅವರಿಗೆ ವಿರುದ್ಧ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮ ದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿ; ಆ ದೇಶವನ್ನು ನಮ್ಮದಾಗಿಸಿಕೊಳ್ಳೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವರು, “ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಹಾಗೆ ಏಳಿರಿ; ಏಕೆಂದರೆ ನಾವು ಆ ದೇಶವನ್ನು ನೋಡಿದೆವು; ಅದು ಬಹಳ ಚೆನ್ನಾಗಿದೆ. ನೀವು ಏನನ್ನಾದರೂ ಮಾಡಲು ಹೋಗುತ್ತೀರಾ? ಆ ದೇಶದಲ್ಲಿ ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವುದಕ್ಕೆ ತಡಮಾಡಬೇಡಿರಿ.