Judges 19:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ಲೇವಿಯು ಇನ್ನೊಂದು ರಾತ್ರಿ ಅಲ್ಲಿ ಇರಲು ಇಷ್ಟಪಡಲಿಲ್ಲ. ಅವನು ತನ್ನ ಎರಡು ಕತ್ತೆಗಳನ್ನು ತೆಗೆದುಕೊಂಡು ಮತ್ತು ತನ್ನ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅವನು ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸ್ ನಗರದವರೆಗೆ ಪ್ರಯಾಣ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು.
Kannada BSI Bible 2016
ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನುಷ್ಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು.
Kannada Bible (KNCL) BSI 2016
ಆದರೆ ಆ ಮನುಷ್ಯ ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವುದಕ್ಕೆ ಮನಸ್ಸಿಲ್ಲದೆ, ಎದ್ದು ತಡಿಕಟ್ಟಿದ ಎರಡು ಕತ್ತೆಗಳ ಮತ್ತು ತನ್ನ ಉಪಪತ್ನಿಯ ಸಂಗಡ ಹೊರಟುಹೋಗಿ, ಯೆರೂಸಲೇಮು ಎಂಬ ಯೆಬೂಸಿಗೆ ಸರಿಯಾಗಿ ಬಂದನು.