Judges 19:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೊತ್ತು ಮುಳುಗುವುದರಲ್ಲಿತ್ತು. ಅವರು ಯೆಬೂಸ್ ನಗರದ ಹತ್ತಿರ ಬಂದಿದ್ದರು. ಆಗ ಅವನ ಸೇವಕನು ತನ್ನ ಒಡೆಯನಾದ ಆ ಲೇವಿಯನಿಗೆ, “ಈ ಯೆಬೂಸಿಯರ ನಗರದಲ್ಲಿ ಇದ್ದು ಬಿಡೋಣ, ಈ ರಾತ್ರಿ ಇಲ್ಲಿಯೇ ಕಳೆಯೋಣ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆಬೂಸಿಯರ ಊರಾದ ಯೆರೂಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತುಮುಳುಗುವ ಸಮಯವಾಗಿದ್ದರಿಂದ ಸೇವಕನು ದಣಿಗೆ, “ದಯವಿಟ್ಟು ಬಾ; ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ, ಅಲ್ಲಿ ರಾತ್ರಿಯನ್ನು ಕಳೆಯೋಣ” ಅಂದನು.
Kannada BSI Bible 2016
ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆಬೂಸಿಯರ ಊರಾದ ಯೆರೂಸಲೇವಿುನ ಸಮೀಪಕ್ಕೆ ಬಂದಾಗ ಹೊತ್ತು ಮುಣುಗುವ ಕಾಲವಾದದರಿಂದ ಸೇವಕನು ದಣಿಗೆ - ದಯವಿಟ್ಟು ಬಾ; ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ ಅಲ್ಲಿ ರಾತ್ರಿಯನ್ನು ಕಳೆಯೋಣ ಅಂದನು.
Kannada Bible (KNCL) BSI 2016
ಅವರು ಯೆಬೂಸಿಯರ ಊರಾದ ಜೆರುಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತು ಮುಳುಗುವ ಕಾಲವಾದುದರಿಂದ ಸೇವಕನು ದಣಿಗೆ, “ದಯವಿಟ್ಟು ಬನ್ನಿ, ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ ಅಲ್ಲಿ ರಾತ್ರಿಯನ್ನು ಕಳೆಯೋಣ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೆಬೂಸಿಗೆ ಸಮೀಪಿಸಿದಾಗ, ಹೊತ್ತು ಬಹಳ ಹೋಗಿತ್ತು. ಆಗ ಸೇವಕನು ತನ್ನ ಯಜಮಾನನಿಗೆ, “ನೀನು ದಯಮಾಡಿ ಬಾ; ಈ ಯೆಬೂಸಿಯರ ಪಟ್ಟಣಕ್ಕೆ ತಿರುಗಿಕೊಂಡು, ಅಲ್ಲಿ ರಾತ್ರಿಯಲ್ಲಿ ಇಳಿದುಕೊಳ್ಳೋಣ,” ಎಂದನು.