Judges 19:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಲೇವಿಯು ಮತ್ತೆ ತನ್ನ ಸೇವಕನಿಗೆ, “ಬಾ ಹೋಗೋಣ, ಗಿಬೆಯದಲ್ಲಾಗಲಿ ಅಥವಾ ರಾಮದಲ್ಲಾಗಲಿ ಈ ರಾತ್ರಿ ಇಳಿದುಕೊಳ್ಳುವ ಪ್ರಯತ್ನ ಮಾಡೋಣ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಿರುಗಿ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ರಾಮದಲ್ಲಾಗಲಿ ಇಳಿದುಕೊಳ್ಳೋಣ ಬಾ” ಅಂದನು.
Kannada BSI Bible 2016
ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಿರಿಗಿ ತನ್ನ ಆಳಿಗೆ - ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ ರಾಮದಲ್ಲಾಗಲಿ ಇಳುಕೊಳ್ಳೋಣ ಬಾ ಅಂದನು.
Kannada Bible (KNCL) BSI 2016
ಅವನು ಮತ್ತೆ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ದಾಮದಲ್ಲಾಗಲಿ ತಂಗೋಣ ಬಾ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಸೇವಕನಿಗೆ, “ಗಿಬೆಯದಲ್ಲಾದರೂ, ರಾಮಾದಲ್ಲಾದರೂ ಇಳಿದುಕೊಳ್ಳುವುದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ,” ಎಂದನು.