Judges 19:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಗಿಬೆಯದಲ್ಲಿ ತಮ್ಮ ಪ್ರಯಾಣವನ್ನು ನಿಲ್ಲಿಸಿದರು. ಅಂದು ರಾತ್ರಿ ಆ ನಗರದಲ್ಲಿ ಇರುವುದಕ್ಕೆ ನಿರ್ಧಾರ ಮಾಡಿದರು. ಅವರು ನಗರದ ಬೀದಿಯ ಮುಖ್ಯಸ್ಥಳಕ್ಕೆ ಬಂದು ಅಲ್ಲಿ ಕುಳಿತುಕೊಂಡರು. ಯಾರೂ ಅವರನ್ನು ಆ ರಾತ್ರಿ ತಮ್ಮ ಮನೆಯಲ್ಲಿ ಇರಲು ಕರೆಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಇಳಿದುಕೊಳ್ಳುವುದಕ್ಕೋಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು.
Kannada BSI Bible 2016
ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಅವರು ಇಳುಕೊಳ್ಳುವದಕ್ಕೋಸ್ಕರ ಗಿಬೆಯಕ್ಕೆ ಹೋಗಿ ಯಾರೂ ಮನೆಯಲ್ಲಿ ಸೇರಿಸಿಕೊಳ್ಳದ್ದರಿಂದ ಸಂತೇ ಬೀದಿಯಲ್ಲಿ ಕೂತುಕೊಂಡರು.
Kannada Bible (KNCL) BSI 2016
ಆದುದರಿಂದ ಅವರು ತಂಗುವುದಕ್ಕಾಗಿ ಗಿಬೆಯಕ್ಕೆ ಹೋಗಿ, ಯಾರೂ ಮನೆಯಲ್ಲಿ ಸೇರಿಸಿಕೊಳ್ಳದೆ ಹೋದುದರಿಂದ ಸಂತೆ ಬೀದಿಯಲ್ಲೇ ಕುಳಿತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವರು ಗಿಬೆಯದಲ್ಲಿ ರಾತ್ರಿ ಕಳೆಯಲು ಉಳಿದರು. ಅವರು ಹೋಗಿ ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು. ಮನೆಯಲ್ಲಿ ಇಳಿದುಕೊಳ್ಳುವುದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳಲಿಲ್ಲ.