Judges 19:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ವೃದ್ಧನು ಮನೆಯಿಂದ ಹೊರಗೆ ಬಂದು ಆ ನೀಚರ ಜೊತೆ ಮಾತನಾಡಿ, “ಬೇಡ, ನನ್ನ ಮಿತ್ರರೇ, ಅಂಥ ಪಾಪದ ಕೆಲಸವನ್ನು ಮಾಡಬೇಡಿ. ಆ ಮನುಷ್ಯ ನನ್ನ ಅತಿಥಿಯಾಗಿದ್ದಾನೆ. ಈ ಭಯಂಕರ ಪಾಪವನ್ನು ಮಾಡಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.
Kannada BSI Bible 2016
ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ - ಸಹೋದರರೇ, ಇಂಥ ದುಷ್ಟತನವನ್ನು ನಡಿಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.
Kannada Bible (KNCL) BSI 2016
ಆಗ ಆ ಮುದುಕ ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನ ಮಾಡಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ, ಅವರಿಗೆ, “ಹಾಗೆ ಮಾಡಬೇಡಿರಿ. ನನ್ನ ಸಹೋದರರೇ, ದಯಮಾಡಿ ಕೆಟ್ಟತನ ಮಾಡಬೇಡಿರಿ. ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥ ಬುದ್ಧಿಹೀನತೆಯನ್ನು ಮಾಡಬೇಡಿರಿ.