Judges 19:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಲ್ಲಿ ನೋಡಿರಿ, ನನ್ನ ಮಗಳಿದ್ದಾಳೆ. ಅವಳು ಯಾರೊಂದಿಗೂ ಈವರೆಗೆ ಸಂಭೋಗ ಮಾಡಿಲ್ಲ. ನಾನು ಅವಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ಕರೆದುಕೊಂಡು ಬರುತ್ತೇನೆ. ನಿಮ್ಮ ಮನಸ್ಸಿಗೆ ಬಂದಂತೆ ಅವರನ್ನು ಬಳಸಿಕೊಳ್ಳಿ. ನೀವು ಅವರನ್ನು ಹಿಂಸಿಸಿದರೂ ಆ ಮನುಷ್ಯನ ವಿರೋಧವಾಗಿ ಅಂಥ ಭಯಂಕರ ಪಾಪವನ್ನು ಮಾಡಬೇಡಿ” ಎಂದು ಅವರನ್ನು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೂ ಮದುವೆಯಾಗದೆ ಇರುವ ನನ್ನ ಮಗಳನ್ನೂ, ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ” ಅಂದನು.
Kannada BSI Bible 2016
ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ ಅಂದನು.
Kannada Bible (KNCL) BSI 2016
ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ. ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಮಾಡಿ; ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕನ್ನಿಕೆಯಾದ ನನ್ನ ಮಗಳೂ, ಅವನ ಉಪಪತ್ನಿಯನ್ನೂ ಹೊರಗೆ ತರುವೆನು. ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ, ಆ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ,” ಎಂದನು.