Judges 19:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ನೀಚರು ಆ ವೃದ್ಧನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆಗ ಆ ಲೇವಿಯು ತನ್ನ ಉಪಪತ್ನಿಯನ್ನು ಹೊರಗೆ ಕರೆದುಕೊಂಡು ಹೋಗಿ ಆ ನೀಚರಿಗೆ ಒಪ್ಪಿಸಿದನು. ಆ ನೀಚರು ಅವಳನ್ನು ಪೀಡಿಸಿ ಇಡೀ ರಾತ್ರಿ ಅವಳನ್ನು ಸಂಭೋಗಿಸಿದರು. ಬೆಳಗಿನ ಜಾವ ಅವಳನ್ನು ಹೋಗಲು ಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರು ಆ ಮುದುಕನಿಗೆ ಕಿವಿಗೊಡದೆ ಹೋದುದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಬಳಿಗೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ, ರಾತ್ರಿಯೆಲ್ಲಾ ಬಹುಕ್ರೂರತನದಿಂದ ವರ್ತಿಸಿ, ಬೆಳಗಾಗುವಾಗ ಆಕೆಯನ್ನು ಬಿಟ್ಟುಹೋದರು.
Kannada BSI Bible 2016
ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರು ಆ ಮುದುಕನಿಗೆ ಕಿವಿಗೊಡಲೊಲ್ಲದೆ ಹೋದದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಮಧ್ಯಕ್ಕೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ ರಾತ್ರಿಯಲ್ಲೆಲ್ಲಾ ಬಹುಕ್ರೂರತನದಿಂದ ನಡಿಸಿ ಕೋಳಿಕೂಗುವ ಹೊತ್ತಾಗಲು ಬಿಟ್ಟು ಹೋದರು.
Kannada Bible (KNCL) BSI 2016
ಆದರೆ ಅವರು ಆ ಮುದುಕನಿಗೆ ಕಿವಿಗೊಡಲೊಲ್ಲದೆ ಹೋದರು. ಆದುದರಿಂದ ಆ ಲೇವಿಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಮಧ್ಯಕ್ಕೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ರಾತ್ರಿಯೆಲ್ಲಾ ಬಹುಕ್ರೂರತನದಿಂದ ನಡಿಸಿ, ಕೋಳಿ ಕೂಗುವ ಹೊತ್ತಾಗಲು ಬಿಟ್ಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದ್ದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು. ಅವರು ಅವಳನ್ನು ತೆಗೆದುಕೊಂಡು ಉದಯಕಾಲದ ಪರ್ಯಂತರ ರಾತ್ರಿಯೆಲ್ಲಾ ಕೆಡಿಸಿ, ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.