Judges 19:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಲೇವಿಯು ಅವಳಿಗೆ, “ಏಳು, ಹೋಗೋಣ” ಎಂದು ಎಬ್ಬಿಸಿದನು. ಆದರೆ ಅವಳು ಉತ್ತರಕೊಡಲಿಲ್ಲ. ಅವಳು ಸತ್ತುಹೋಗಿದ್ದಳು. ಆ ಲೇವಿಯು, ಅವಳನ್ನು ತನ್ನ ಕತ್ತೆಯ ಮೇಲೆ ಹೇರಿಕೊಂಡು ಮನೆಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ಏಳು, ಹೋಗೋಣ” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಮನೆಗೆ ಹೋದನು.
Kannada BSI Bible 2016
ಆಗ ಅವನು ಅವಳಿಗೆ--ಏಳು, ಹೋಗೋಣ ಅಂದನು. ಆದರೆ ಪ್ರತ್ಯುತ್ತರವೇನೂ ಇಲ್ಲದೆ ಹೋಯಿತು. ಆಗ ಆ ಮನುಷ್ಯನು ಅವಳನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಸ್ಥಳಕ್ಕೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ಏಳು, ಹೋಗೋಣ ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು.
Kannada Bible (KNCL) BSI 2016
ಅವನು, “ಏಳು, ಹೋಗೋಣ,” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಬರಲಿಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಅವಳಿಗೆ, “ಏಳು, ಹೋಗೋಣ,” ಎಂದನು. ಆದರೆ ಅವಳಿಂದ ಪ್ರತ್ಯುತ್ತರ ಬರಲಿಲ್ಲ. ಆಗ ಆ ಮನುಷ್ಯನು ಅವಳ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು, ತನ್ನ ಸ್ಥಳಕ್ಕೆ ಹೋದನು.