Judges 19:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವಳ ತಂದೆಯು ಆ ಲೇವಿಯನನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋಗಿ, ಅಲ್ಲೇ ಇರುವಂತೆ ಕೇಳಿಕೊಂಡನು. ಆದ್ದರಿಂದ ಆ ಲೇವಿಯು ಅಲ್ಲಿ ಮೂರು ದಿನ ಇದ್ದನು. ಅವನು ಅನ್ನಪಾನಮಾಡಿ ಮಾವನ ಮನೆಯಲ್ಲಿ ಮಲಗುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿನ ಅಲ್ಲೇ ಉಳಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.
Kannada BSI Bible 2016
ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿವಸ ಅಲ್ಲೇ ನಿಲ್ಲಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.
Kannada Bible (KNCL) BSI 2016
ಆ ಸ್ತ್ರೀ ಹಾಗು ಅವನ ಮಾವ ಅವನನ್ನು ಮೂರು ದಿವಸ ಅಲ್ಲೇ ನಿಲ್ಲಿಸಿಕೊಂಡರು. ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಮಾವನು ಅಂದರೆ ಆ ಸ್ತ್ರೀಯ ತಂದೆಯು ಅವನನ್ನು ಅಲ್ಲಿರುವಂತೆ ಒತ್ತಾಯ ಮಾಡಿದನು. ಆದ್ದರಿಂದ ಅವನು ಅಲ್ಲಿ ಊಟಮಾಡುತ್ತಾ, ಕುಡಿಯುತ್ತಾ, ಮಲಗುತ್ತಾ ಮೂರು ದಿನಗಳನ್ನು ಕಳೆದನು.