Judges 19:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಲ್ಕನೆಯ ದಿನ ಅವರು ಬೆಳಗಿನ ಜಾವ ಬೇಗ ಎದ್ದರು. ಆ ಲೇವಿಯು ಹೊರಡುವದಕ್ಕೆ ಸಿದ್ಧನಾಗುತ್ತಿದ್ದನು. ಆದರೆ ಮಾವನು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡು; ಆಮೇಲೆ ಹೋಗುವಿಯಂತೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು” ಎಂದು ಹೇಳಲು
Kannada BSI Bible 2016
ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು ಎಂದು ಹೇಳಲು
Kannada Bible (KNCL) BSI 2016
ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾದರು. ಆ ಸ್ತ್ರೀಯ ತಂದೆ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಚೇತರಿಸಿಕೊ, ಆಮೇಲೆ ಹೋಗಬಹುದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಲ್ಕನೆಯ ದಿನ ಅವರು ಬೇಗನೆ ಎದ್ದು, ಹೊರಡಲಿಕ್ಕೆ ಸಿದ್ಧರಾದರು. ಆದರೆ ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡಿ ಚೇತರಿಸಿಕೋ, ಆಮೇಲೆ ನೀವು ಹೋಗಬಹುದು,” ಎಂದನು.