Judges 19:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಐದನೆಯ ದಿನ ಆ ಲೇವಿಯು ಬೆಳಗಿನ ಜಾವ ಬೇಗ ಎದ್ದು ಹೊರಡಲು ಸಿದ್ಧನಾಗಿದ್ದನು. ಆದರೆ ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಊಟಮಾಡು; ವಿಶ್ರಾಂತಿ ತೆಗೆದುಕೋ. ಈ ರಾತ್ರಿ ಇಲ್ಲಿಯೇ ಇರು” ಎಂದು ಕೇಳಿಕೊಂಡನು. ಅವರಿಬ್ಬರು ಮತ್ತೆ ಊಟ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು, “ದಯವಿಟ್ಟು ಮಧ್ಯಾಹ್ನದವರೆಗೆ ಇಲ್ಲೇ ಇದ್ದು ಬಲಹೊಂದು” ಎಂದು ಅವನನ್ನು ಬೇಡಿಕೊಳ್ಳಲು ಅವರು ತಿರುಗಿ ಊಟಕ್ಕೆ ನಿಂತನು.
Kannada BSI Bible 2016
ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು - ದಯವಿಟ್ಟು ಇಳಿಹೊತ್ತಿನವರೆಗೆ ಇಲ್ಲೇ ಇದ್ದು ಬಲಹೊಂದು ಎಂದು ಅವನನ್ನು ಬೇಡಿಕೊಳ್ಳಲು ತಿರಿಗಿ ಊಟಕ್ಕೆ ನಿಂತನು.
Kannada Bible (KNCL) BSI 2016
ಅವನು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆ, “ದಯವಿಟ್ಟು ಇಳಿಹೊತ್ತಿನವರೆಗೆ ಇಲ್ಲೇ ಇದ್ದು ವಿಶ್ರಮಿಸಿಕೋ,” ಎಂದು ಅವನನ್ನು ಬೇಡಿಕೊಳ್ಳಲು ಅವನು ಮತ್ತೆ ಊಟಕ್ಕೆ ನಿಂತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐದನೆಯ ದಿನದ ಮುಂಜಾನೆ ಅವನು ಹೊರಡಲು ಎದ್ದೇಳುವಾಗ, ಆ ಸ್ತ್ರೀಯ ತಂದೆಯು, “ವಿಶ್ರಮಿಸಿಕೋ, ಮಧ್ಯಾಹ್ನದವರೆಗೆ ಇರು,” ಎಂದನು. ಅದರಂತೆ ಅವರಿಬ್ಬರು ಒಟ್ಟಾಗಿ ಊಟಮಾಡಿದರು.